antalya otogar rent a car Elektronik Sigara al ordu haberleri fatsa haberleri ordu haberleri sesli chat

ಮಹಾರಾಷ್ಟ್ರ: ಗೊಂಡಿಯಾದ ಹೋಟೆಲ್' ಬೆಂಕಿಗಾಹುತಿ 6 ಮಂದಿ ಸಜೀವ ದಹನ | ASIAVISION NEWS
Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಮಹಾರಾಷ್ಟ್ರ: ಗೊಂಡಿಯಾದ ಹೋಟೆಲ್' ಬೆಂಕಿಗಾಹುತಿ 6 ಮಂದಿ ಸಜೀವ ದಹನ

Wednesday, December 21 2016

ಗೊಂಡಿಯಾ(www.asiavisionnews.com) : ಪೂರ್ವ ಮಹಾರಾಷ್ಟ್ರದ ಹೋಟೆಲ್ ಬಿಂದಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೋಟೆಲ್ ನಲ್ಲಿದ್ದ 6 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಬುಧವಾರ ನಡೆದಿದೆ.

ಇಂದು ಬೆಳಿಗ್ಗೆ 3.30ರ ಸುಮಾರಿಗೆ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ ಒಳಗೆ 6 ಮಂದಿ ಕೆಲಸಗಾರರು ಮಲಗಿದ್ದ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮಲಗಿದ್ದ 6 ಮಂದಿ ಕೆಲಸಗಾರರು ಸಜೀವವಾಗಿ ದಹನವಾಗಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಹೋಟೆಲ್ ಒಳಗೆ ಇನ್ನು ಕೆಲವು ಸಿಬ್ಬಂದಿಗಳು ಸಿಲುಕಿಕೊಂಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿತೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Comments