Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501, 9895046567 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಸುಪ್ರೀಂ ಕೋರ್ಟ್ ಆವರಣದಲ್ಲೇ ಪೇದೆ ಆತ್ಮಹತ್ಯೆ ಸುಪ್ರೀಂ ಕೋರ್ಟ್ ನ ಭದ್ರತಾ ಕಾರ್ಯಕ್ಕಾಗಿ ನಿಯೋಜನೆಗೊಂಡಿದ್ದ ಮುಖ್ಯಪೇದೆ ಚಾಂದ್ ಪಾಲ್ ಆತ್ಮಹತ್ಯೆ

Monday, January 02 2017
img

ನವದೆಹಲಿ (www.asiavisionnews.com): ದೆಹಲಿಯ ಸುಪ್ರೀಂ ಕೋರ್ಟ್ ಆವರಣದಲ್ಲಿ ಕಾರ್ಯ ನಿರತ ಮುಖ್ಯಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ.

ಸೋಮವಾರ ಬೆಳಗ್ಗೆ ಸುಪ್ರೀಂ ಕೋರ್ಟ್ ನ ಆವರಣದಲ್ಲಿ ಭದ್ರತೆಯ ಮೇಲ್ವಿಚಾರಣೆ ನಡೆಸುತ್ತಿದ್ದ ದೆಹಲಿ ಪೊಲೀಸ್ ಮುಖ್ಯಪೇದೆ ಚಾಂದ್ ಪಾಲ್ ಎಂಬುವವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡುಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಗುಂಡಿನ ಶಬ್ದ ಕೇಳುತ್ತಿದ್ದಂತೆಯೇ ಸಮೀಪಕ್ಕೆ ದೌಡಾಯಿಸಿದ ಇತರೆ ಪೊಲೀಸರು ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಅಷ್ಟು ಹೊತ್ತಿಗಾಗಲೇ ಪೊಲೀಸ್ ಪೇದೆ ಚಾಂದ್ ಪಾಲ್ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಚಾಂದ್ ಪಾಲ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ ಆವರಣದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Comments