ವೈದ್ಯರ ಮೇಲೆ ಹಲ್ಲೆ: ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಸಂಸದ ಅನಂತ್ ಕುಮಾರ್ ಅವರ ವಿರುದ್ಧ 'ಸುವೋ-ಮೋಟೊ' (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡಿದ್ದಾರೆ.

Friday, January 06 2017
img

ನವದೆಹಲಿ(www.asiavisionnews.com) : ಅನಾರೋಗ್ಯ ಪೀಡಿತರಾಗಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಲಿಲ್ಲ ಎಂದು ಆರೋಪಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಅನಂತ್ ಕುಮಾರ್ ಹೆಗ್ಡೆಯವರ ತಾಯಿಯನ್ನು ಸಿರ್ಸಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ತಾಯಿಗೆ ಸೂಕ್ತ ರೀತಿಯ ಚಿಕಿತ್ಸೆ ಕೊಡುತ್ತಿಲ್ಲ ಎಂದು ಆರೋಪಿಸಿ ಅನಂತ್ ಕುಮಾರ್ ಅವರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ವೈದ್ಯರ ಮೇಲೆ ಹಲ್ಲೆ ನಡೆಸುತ್ತಿದ್ದ ದೃಶ್ಯಾವಳಿಗಳು ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಈ ವಿಡಿಯೋ ಸಾಕಷ್ಟು ವಿರೋಧಗಳಿಗೆ ಕಾರಣವಾಗಿತ್ತು. ಅಲ್ಲದೆ, ಮಂಗಳೂರಿನ ವೈದ್ಯ ಸಂಘಟನೆಗಳು ತೀವ್ರ ಆಕ್ರೋಶಗಳನ್ನು ವ್ಯಕ್ತಪಡಿಸಿತ್ತು.

ಪ್ರಕರಣ ಸಂಬಂಧ ಯಾವುದೇ ಅಧಿಕೃತ ದೂರುಗಳು ದಾಖಲಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಸಂಸದ ಅನಂತ್ ಕುಮಾರ್ ಅವರ ವಿರುದ್ಧ 'ಸುವೋ-ಮೋಟೊ' (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Comments