antalya otogar rent a car Elektronik Sigara al ordu haberleri fatsa haberleri ordu haberleri sesli chat

ನಾನು ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ: ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ: ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪಂಜಾಬ್ ನ ವ್ಯಕ್ತಿಯೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದ ಕೇಜ್ರಿವಾಲ್ | ASIAVISION NEWS
Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ನಾನು ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ: ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ: ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪಂಜಾಬ್ ನ ವ್ಯಕ್ತಿಯೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದ ಕೇಜ್ರಿವಾಲ್

Wednesday, January 11 2017
img

ನವದೆಹಲಿ(www.asiavisionnews.com) : ಪಂಜಾಬ್ ನಲ್ಲಿ ನಾನು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಪಂಜಾಬ್ ನ ಪಟಿಯಾಲದಲ್ಲಿ ಪಕ್ಷದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ನಾನು ದೆಹಲಿಯನ್ನು ಕೈಬಿಟ್ಟು ಪಂಜಾಬ್ ನ ಮುಖ್ಯಮಂತ್ರಿಯಾಗುವುದಿಲ್ಲ. ದೆಹಲಿ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುತ್ತೇನೆ ಎಂದರು.
ಒಂದು ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪಂಜಾಬ್ ನ ವ್ಯಕ್ತಿಯೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನಿನ್ನೆಯಷ್ಟೇ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅರವಿಂದ್ ಕೇಜ್ರಿವಾಲ್ ಅವರೇ ಪಂಜಾಬ್ ಮುಂದಿನ ಮುಖ್ಯಮಂತ್ರಿ ಎಂದು ಭಾವಿಸಿ ಎಎಪಿಗೆ ಮತ ಹಾಕುವಂತೆ ಕರೆ ನೀಡಿದ್ದರು. ಇದಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪಷ್ಟನೆ ನೀಡಿದ್ದು, ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಿತ್ತು. ಇಂದು ಕೇಜ್ರಿವಾಲ್ ಅವರೇ ಈ ಬಗ್ಗೆ ಸ್ವತಃ ಸ್ಪಷ್ಟನೆ ನೀಡಿದ್ದಾರೆ.

Comments