Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501, 9895046567 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಸಿಹಿ ವಿತರಣೆ ಯೋಧರೊಂದಿಗೆ ಮೋದಿ ದೀಪಾವಳಿ ಸಂಭ್ರಮಾಚರಣೆ

Thursday, October 19 2017
img

ಶ್ರೀನಗರ(www.asiavisionnews.com): ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರದ ಗಡಿಯಲ್ಲಿ ಗುರುವಾರ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು.

ಗುರೇಜ್‌ ಸೆಕ್ಟರ್‌ಗೆ ಭೇಟಿ ನೀಡಿದ ಮೋದಿ, ಇಲ್ಲಿನ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಪ್ರದೇಶದಲ್ಲಿ ಯೋಧರಿಗೆ ದೀಪಾವಳಿ ಹಬ್ಬದ ಶುಭ ಕೋರಿ ಸಿಹಿ ಹಂಚಿದರು.
014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಧಾನಿ ಮೋದಿ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ತಿಳಿಸಿದ್ದರು. ಇದೀಗ ಮೋದಿ ಅವರು ಎರಡನೇ ಬಾರಿಗೆ ಇಲ್ಲಿಗೆ ಬಂದಿದ್ದು, ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಅಟ್ಟಾರಿ - ವಾಘಾ ಗಡಿಯಲ್ಲಿ ಸಿಹಿ ವಿನಿಮಯ
ಇದೇ ವೇಳೆ ದೀಪಾವಳಿ ಹಬ್ಬದ ಪ್ರಯುಕ್ತ ಭಾರತ ಮತ್ತು ಪಾಕಿಸ್ತಾನದ ಅಟ್ಟಾರಿ - ವಾಘಾ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳುವ ಮೂಲಕ ಶುಭ ಕೋರಿದ್ದಾರೆ.

Comments