Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501, 9895046567 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಮೇಟಿಯನ್ನು ವಜಾ ಮಾಡಲಿ : ಸಿದ್ದುಗೆ ಪೂಜಾರಿ ಸವಾಲ್ ಮುಖ್ಯಮಂತ್ರಿಗೆ ತಾಕತ್ ಇದ್ದರೆ ರಾಸಲೀಲೆಯಲ್ಲಿ ಸಿಲುಕಿರುವ ಮೇಟಿ ಅವರನ್ನು ವಜಾಗೊಳಿಸಲಿ

Tuesday, December 13 2016
img

ಮಂಗಳೂರು (www.asiavisionnews.com) : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೈತಿಕತೆ ಇದ್ದರೆ ಕೂಡಲೇ ರಾಸಲೀಲೆ ಪ್ರಕರಣದಲ್ಲಿ ಸಿಲುಕಿರುವ ಅಬಕಾರಿ ಸಚಿವ ಎಚ್.ವೈ.ಮೇಟಿಯನ್ನ ಸಂಪುಟದಿಂದ ವಜಾಗೊಳಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಸವಾಲು ಹಾಕಿದ್ದಾರೆ. ಸೋಮವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಪೂಜಾರಿ ಅವರು, ಮೇಟಿ ರಾಸಲೀಲೆ ಪ್ರಕರಣದಲ್ಲಿ ಸಿಲುಕುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತಂದಿದ್ದಾರೆ.

ರಾಜೀನಾಮೆ ನೀಡದಿದ್ದರೆ ಮೇಟಿಯವರನ್ನ ಸಂಪುಟದಿಂದ ವಜಾಗೊಳಿಸಲಿ. ತಾಕತ್ತು ಇಲ್ಲದಿದ್ದರೆ ತಾವೇ ರಾಜೀನಾಮೆ ನೀಡಲಿ ಎಂದು ಕಿಡಿಕಾರಿದರು. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪೂಜಾರಿ, ಮುಖ್ಯಮಂತ್ರಿಗೆ ಸಚಿವರ, ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ. ಅವರು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಅಧಿಕಾರ ಕೊಡಿಸಿದ ಕನ್ನಡಿಗರನ್ನ ಕಡೆಗಣಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೇಟಿ ರಾಸಲೀಲೆ ಪ್ರಕರಣದ ಬಗ್ಗೆ ಮಾಧ್ಯಮದವರು, ರಾಜ್ಯದ ಜನರು ಪ್ರಶ್ನಿಸಿದ್ದು ತಪ್ಪೇ? ಎಂದೂ ಪ್ರಶ್ನಿಸಿದರು.

Comments