Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501, 9895046567 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಮಂಗಳೂರು:: ಕೋಮುವಾದಿಗಳನ್ನು ಬೆಂಬಲಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

Monday, November 13 2017
img

ಮಂಗಳೂರು (www.asiavisionnews.com) : ‘ಹಿಂದೂ ಕೋಮುವಾದಿಗಳಿರಲಿ, ಮುಸ್ಲಿಂ ಕೋಮುವಾದಿಗಳಿರಲಿ ಯಾರನ್ನೂ ನಾವು ಬೆಂಬಲಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಖಾಸಗಿ ಭೇಟಿಗಾಗಿ ಭಾನುವಾರ ಸಂಜೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ಕೋಮುವಾದಿ ಚಟುವಟಿಕೆಗಳಿಗೆ ಮುಖ್ಯಮಂತ್ರಿ ನೇರವಾಗಿ ಬೆಂಬಲ ನೀಡುತ್ತಿದ್ದಾರೆ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು.

‘ನಾನು, ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ಕೋಮುವಾದದ ವಿರುದ್ಧ ಇದ್ದೇವೆ. ಸ್ಪಷ್ಟವಾಗಿ ಇದನ್ನು ಹಲವು ಬಾರಿ ಹೇಳಿದ್ದೇವೆ. ಯಾವುದೇ ಧರ್ಮದ ಕೋಮುವಾದಿಗಳಿದ್ದರೂ ನಾವು ಅವರನ್ನು ವಿರೋಧಿಸುತ್ತೇವೆ. ಕೋಮುವಾದಿಗಳನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿಯವರು ರಾಜಕೀಯಕ್ಕಾಗಿ ಇಂತಹ ಆರೋಪಗಳನ್ನು ಮಾಡುತ್ತಿರುತ್ತಾರೆ’ ಎಂದು ಸಿದ್ದರಾಮಯ್ಯ ಅವರು ಹೇಳಿದರು.

Comments