ಅನಿಲ್ ಕುಂಬ್ಳೆ ಟೀಂ ಇಂಡಿಯಾ ನೂತನ ಕೋಚ್

Friday, June 24 2016
img

ನವದೆಹಲಿ [ www.asiavisionnews.com ] : ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಟೀಂ ಇಂಡಿಯಾ ಕೋಚ್ ಹುದ್ದೆಗೆ ಕೊನೆಗೂ ಸಾರಥಿ ಸಿಕ್ಕಂತಾಗಿದೆ. ಹೌದು ಮಾಜಿ ಕ್ರಿಕೆಟಿಗ ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಘೋಷಿಸಿದೆ.
ಟೀಂ ಇಂಡಿಯಾ ಕೋಚ್ ಆಯ್ಕೆ ವಿಚಾರವಾಗಿ ಇಂದು ಹಿಮಾಚಲದ ಧರ್ಮಶಾಲಾದಲ್ಲಿ ನಡೆದ ಬಿಸಿಸಿಐ ಉನ್ನತ ಮಟ್ಟದ ಸಭೆಯಲ್ಲಿ ಅನಿಲ್ ಕುಂಬ್ಳೆಯನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಾಗಿದೆ.ಮಾಜಿ ಡೈರೆಕ್ಟರ್ ರವಿಶಾಸ್ತ್ರಿ ಹಾಗೂ ಸಂದೀಪ್ ಪಾಟೀಲ್ ಕೋಚ್ ಹುದ್ದೆ ರೇಸ್ ನಲ್ಲಿದ್ದರು. ಇವರಿಬ್ಬರನ್ನು ಹಿಂದಿಕ್ಕಿದ ಅನಿಲ್ ಕುಂಬ್ಳೆ ಕೋಚ್ ಆಗಿ ಆಯ್ಕೆಯಾಗಿದ್ದಾರೆ.
ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ತ್ರಿಮೂರ್ತಿಗಳನ್ನೊಳಗೊಂಡ ಸಲಹಾ ಸಮಿತಿ ಕೋಚ್ ಹುದ್ದೆ ಆಕಾಂಕ್ಷಿಗಳ ಸಂದರ್ಶನ ನಡೆಸಿ ಅದರ ವರದಿ ಮತ್ತು ತಮ್ಮ ಶಿಫಾರಸ್ಸನ್ನು ಬಿಸಿಸಿಐಗೆ ನೀಡಿತ್ತು.
ಸಲಹಾ ಸಮಿತಿ ಸಲಹೆ ಹಿನ್ನೆಲೆ ಅನಿಲ್ ಕುಂಬ್ಳೆ ಅವರನ್ನು ಒಂದು ವರ್ಷದ ಅವಧಿಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

Comments