Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಕುಂಬ್ಳೆ ರಾಜೀನಾಮೆ: ಆರು ತಿಂಗಳಿಂದ ಮಾತನಾಡದ ಕುಂಬ್ಳೆ–ಕೊಹ್ಲಿ?

Thursday, June 22 2017
img

ನವದೆಹಲಿ (www.asiavisionnews.com): ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಮತ್ತು ನಾಯಕ ವಿರಾಟ್ ಕೊಹ್ಲಿ ಅವರ ನಡುವೆ ಕಳೆದ ಆರು ತಿಂಗಳಿಂದ ಪರಸ್ಪರ ಮಾತಾಡುತ್ತಿರಲಿಲ್ಲವಂತೆ. ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

‘ಹೋದ ಡಿಸೆಂಬರ್‌ನಲ್ಲಿ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯ ನಂತರ ಇಬ್ಬರ ನಡುವೆ ಮಾತುಕತೆ ನಿಂತಿತ್ತು. ಯಾವ ರೀತಿಯ ಸಮಸ್ಯೆಗಳಿದ್ದವು ಎಂಬುದು ಗೊತ್ತಿಲ್ಲ. ಆದರೆ ಇಬ್ಬರ ನಡುವಿನ ಸಂಬಂಧ ಹಳಸಿತ್ತು.

ಜೂನ್ 18ರಂದು ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ನಂತರ ಅವರಿಬ್ಬರೊಂದಿಗೆ ಬಿಸಿಸಿಐ ಪ್ರತಿನಿಧಿಗಳು ಚರ್ಚಿಸಿದರು. ನಂತರ ಅವರು ತಮ್ಮಿಬ್ಬರ ನಡುವಿನ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದರು’ ಎಂದು ತಿಳಿಸಿದ್ದಾರೆ.

Comments