Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501, 9895046567 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಚಂಡಮಾರುತದ ಅಬ್ಬರ : ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ಗಂಭೀರ: ಕೊಚ್ಚಿಹೋಗುತ್ತಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳ ರಕ್ಷಣೆ

Wednesday, August 30 2017
img

ಹ್ಯೂಸ್ಟನ್ (www.asiavisionnews.com): ಟೆಕ್ಸಾಸ್ ರಾಜ್ಯದಲ್ಲಿ ಚಂಡಮಾರುತ ಹಾಗೂ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ಕೆರೆಯಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಸ್ಥಿತಿ ಗಂಭೀರವಾಗಿದೆ. ಪ್ರವಾಹದಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಭಾರತೀಯ ಸಮುದಾಯದವರು ತೊಂದರೆಗೆ ಸಿಲುಕಿದ್ದಾರೆ.

ಟೆಕ್ಸಾಸ್‌ನ ಎ ಅಂಡ್ ಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಶಾಲಿನಿ ಹಾಗೂ ನಿಖಿಲ್ ಭಾಟಿಯಾ ಅವರು ಶನಿವಾರದಂದು ಬ್ರಿಯಾನ್ ಕೆರೆಯಲ್ಲಿ ಈಜಲು ಹೋಗಿದ್ದಾಗ ಪ್ರವಾಹಕ್ಕೆ ಸಿಲುಕಿದ್ದರು. ಪ್ರಥಮ ಚಿಕಿತ್ಸೆ ಬಳಿಕ ಸೇಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಲಾಯಿತು.

ವಿಷಮ ವಾತಾವರಣವಿದ್ದರೂ ಇವರು ಏಕೆ ಈಜಲು ತೆರಳಿದ್ದರು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಹ್ಯೂಸ್ಟನ್‌ನಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ಅವರು ವಿದ್ಯಾರ್ಥಿಗಳ ವೈದ್ಯಕೀಯ ಅಗತ್ಯವನ್ನು ಪೂರೈಸುತ್ತಿದ್ದಾರೆ.

ನಿಖಿಲ್ ಅವರ ಆರೋಗ್ಯದಲ್ಲಿ ಇನ್ನಷ್ಟೇ ಚೇತರಿಕೆ ಕಾಣಬೇಕಿದೆ. ಆದರೆ ಶಾಲಿನಿ ಆರೊಗ್ಯವು ಅವರು ಆಸ್ಪತ್ರೆಗೆ ದಾಖಲಾದ ಬಳಿಕ ಇದೇ ಮೊದಲ ಬಾರಿಗೆ ಕೊಂಚ ಸುಧಾರಿಸಿದೆ.

Comments