Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501, 9895046567 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್

Monday, September 25 2017

ಇಸ್ಲಾಮಾಬಾದ್ (www.asiavisionnews.com): ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 22 ರಂದು ಕೊಟ್ಲಿ ಮತ್ತು ನಿಕಿಯಲ್ ಸೆಕ್ಟರ್ ಬಳಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ನಡೆಸಲಾದ ಅಪ್ರಚೋದಿತ ಗುಂಡಿನ ದಾಳಿಗೆ 22 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಅಲ್ಲದೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ಹೇಳಿಕೊಂಡಿದ್ದು, ಭಾರತದ ಹೈ ಕಮಿಷನರ್ ಗೌತಮ್ ಬಾಂಬಾವಲೆಗೆ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಗಡಿಯಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಕದನ ವಿರಾಮ ಉಲ್ಲಂಘನೆಯನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ. ಉದ್ದೇಶಪೂರ್ವಕವಾಗಿ ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದು ಮಾನವ ಘನತೆ, ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಹಾಗೂ ಮಾನವೀಯ ಕಾನೂನುಗಳಿಗೆ ವಿರುದ್ಧದ್ದಾಗಿದೆ.

2003ರ ಅಂತರಾಷ್ಟ್ರೀಯ ಗಡಿ ಹಾಗೂ ಕದನ ವಿರಾಮ ಉಲ್ಲಂಘನೆ ಒಪ್ಪಂದವನ್ನು ಭಾರತ ಗೌರವಿಸಬೇಕು ಪ್ರಸ್ತುತ ಗಡಿಯಲ್ಲಿ ಭಾರತೀಯ ಸೇನೆ ನಡೆಸಿರುವ ಕದನ ವಿರಾಮ ಉಲ್ಲಂಘನೆ ಕುರಿತಂತೆ ತನಿಖೆ ನಡೆಸಬೇಕಿದೆ ಹಾಗೂ ಗಡಿಯಲ್ಲಿ ಶಾಂತಿ ಕಾಪಾಡುವಂತೆ ಹಾಗೂ ಕದನ ವಿರಾಮ ಉಲ್ಲಂಘನೆ ಕುರಿತು ಒಪ್ಪಂದವನ್ನು ಗೌರವಿಸುವಂತೆ ಭಾರತ ತನ್ನ ಸೇನೆಗೆ ಸೂಚಿಸಬೇಕಿದೆ ಎಂದು ಸಮನ್ಸ್'ನಲ್ಲಿ ತಿಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

Comments